ಬೆಂಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಗಳ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಜ್ವಲ್ ಬಂಧನವಾಗಿದೆ.
ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ತಂದೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ನ್ಯಾಯಾಂಗ ವಶಕ್ಕೂ ಪಡೆಯಲಾಗಿದೆ. ಇದರ ಬೆನ್ನಲ್ಲೆ ಮೂಡಿಗೆರೆಯಲ್ಲಿ ಪೋಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುರಿತಾದ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜಕೀಯ ಆರೋಪ, ಪ್ರತ್ಯಾರೋಪಗಳು ನಡೆದಿದ್ದವು. ಇದರ ಬೆನ್ನಲ್ಲೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಮಾಧ್ಯಮಗಳು ವಿಡಿಯೋ ಪ್ರಸಾರ, ಸಾಮಾಜಿಕ ಬಳಕೆದಾರರು ವಿಡಿಯೋ ಹಂಚಿಕೆ, ವಿಡಿಯೋ ಶೇರ್ ಮಾಡದಂತೆ ಸೂಚನೆ ನೀಡಿತ್ತು. ಕಾನೂನು ಕ್ರಮ ಎಂದಿದ್ದ ಎಸ್‌ಐಟಿ ಹಾಗೇನಾದರು ಮಾಡಿದಲ್ಲಿ ಇದು ಐಟಿ ಕಾಯ್ದೆಯ ಉಲ್ಲಂಘನೆ ಆಗಲಿದ್ದು, ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದರು. ವಿಡಿಯೋ ಶರ್ ನಿಂದ ತಮ್ಮ ತಪ್ಪಿಲ್ಲದಿದ್ದರೂ ಪ್ರಕರಣ ಸಂತ್ರಸ್ತ ನೂರಾರು ಹೆಣ್ಣುಮಕ್ಕಳ ಘನತೆಗೆ ಧಕ್ಕೆ ಉಂಟಾಗುತ್ತದೆ ಎಂದು ಹೇಳಿತ್ತು. ಇಂತಹ ವಿಡಿಯೋ ಮೊಬೈಲ್ ನಲ್ಲಿ ಇಟ್ಟುಕೊಳ್ಳುವುದು ಅಪರಾಧ ಅಂತಲೂ ಎಸ್‌ಐಟಿ ತಿಳಿಸಿತ್ತು. ಇದೀಗ ಈ ಎಲ್ಲ ಸೂಚನೆಗಳನ್ನು ಗಾಳಿಗೆ ತೂರಿರುವ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಈ ಆರೋಪಿ ಪಜ್ವಲ್ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋಗಳು’ ಎಂದು ಫೇಸ್ ಬುಕ್, ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.