ಅಶ್ಲೀಲ ವಿಡಿಯೋ ಪೇನ್ ಡ್ರೈವ್ ಹಂಚಿದ ಜಿ.ದೇವರಾಜೇಗೌಡ ಬಂಧನ
ಚಿತ್ರದುರ್ಗ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ವಕೀಲ ಮತ್ತು ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ವಕೀಲ ದೇವರಾಜೆಗೌಡ ಮೇಲೆ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಹೊಳೆನರಸೀಪುರ ಪೋಲಿಸರು ಹಿರಿಯೂರು ತಾಲೂಕಿನ ಗೂಯಿಲಾಳು ಟೋಲ್ ಬಳಿ ಆರೋಪಿ ಇರುವ ಖಚಿತ ಮಾಹಿತಿ ಪಡೆದು ಶುಕ್ರವಾರ ಬಂಧಿಸಿದ್ದಾರೆ.