ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ
ವೇಣೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವೇಣೂರು ಆಂಗ್ಲಮಾಧ್ಯಮ ಶಾಲೆಯು ಶೇ. 100 ಫಲಿತಾಂಶ ದಾಖಲಿಸಿದೆ.
ಒಟ್ಟು ಫಲಿತಾಂಶದಲ್ಲಿ 12 ಮಂದಿ ವಿದ್ಯಾರ್ಥಿಗಳು ಉನ್ನತಶ್ರೇಣಿ, 22 ಮಂದಿ ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಾಲಾ ವಿದ್ಯಾರ್ಥಿನಿ ವಿಯೋಲ ಮೊರಾಸ್ ಶೇ. 98 ಅಂಕ ಪಡೆದು ಪ್ರಥಮ ಸ್ಥಾನ ಹಾಗೂ ಈಶಾನ್ ಶೇ. 96.64 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ವೈಷ್ಣವಿ ಶೇ. 95.20 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಸಿ| ಶಾಲಿನಿ ಡಿಸೋಜ, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.