SSLC EXAM-2024: ಶೇ. 100 ಫಲಿತಾಂಶ ದಾಖಲಿಸಿದ ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆ
ವೇಣೂರು: ಇಲ್ಲಿಯ ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯು ಈ ಭಾರಿಯೂ ಶೇ. 100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 31 ಮಂದಿ ವಿದ್ಯಾರ್ಥಿಗಳಲ್ಲಿ 7 ಮಂದಿ ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ, 12 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 12 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲೆಯ ಸಂಚಾಲಕರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಶಿಕ್ಷಕ ವೃಂದ ಮತ್ತು ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ. ಎಸ್‌ಎಸ್‌ಎಲ್‌ಸಿಯಲ್ಲಿ 11ನೇ ಬಾರಿ ಸಂಸ್ಥೆಯು ಶೇ. 100 ಫಲಿತಾಂಶ ದಾಖಲಿಸಿರುವುದಾಗಿ ಸಂಚಾಲಕರು ತಿಳಿಸಿದ್ದಾರೆ.