ಕಲಬುರಗಿ, ಮೇ 22: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಪ್ತರು ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಅವರು (81) ವಿಧಿವಶರಾಗಿದ್ದಾರೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.