ಅತ್ಯಾಚಾರ ಪ್ರಕರಣ: ವಕೀಲ ದೇವರಾಜೇಗೌಡ ನ್ಯಾಯಾಂಗ ಬಂಧನ ವಿಸ್ತರಣೆ
ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರಿಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇನ್ನೂ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಹಾಸನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ (ಶುಕ್ರವಾರ) ಮುಕ್ತಾಯವಾಗಿದ್ದ ಕಾರಣ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜೂನ್ 7ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತು.
ಅತ್ಯಾಚಾರ ಆರೋಪದ ಪ್ರಕರಣದಲ್ಲಿ ದೇವರಾಜೇಗೌಡ ಅವರಿಗೆ ಮೇ 11 ರಂದು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿತ್ತು, ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್ಸಿ ಕೋರ್ಟ್ ಆದೇಶ ಕೊಟ್ಟಿತ್ತು.