ಕೆಲವೇ ಕ್ಷಣಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ. ದ.ಕ., ಉಡುಪಿಗೆ ಇಂದು-ನಾಳೆ ಯೆಲ್ಲೋ ಅಲರ್ಟ್ ಘೋಷಣೆ
Karnataka Rain: ರಾಜ್ಯದ ಹಲವು ಭಾಗಗಳಲ್ಲಿ ಮಳೆರಾಯನ ಬಿಟ್ಟುಬಿಡದೇ ಆರ್ಭಟಿಸುತ್ತಿದ್ದಾರೆ. ಹಾಗೆಯೇ ಇಂದು (ಮೇ 26) ಇನ್ನು ಕಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಅಬ್ಬರದ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಹಲವೆಡೆ ಎರಡು ದಿನ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು (ಮೇ 26) ಕೂಡ ನಗರದ ಬಹತೇಕ ಭಾಗದಲ್ಲಿ ಬೆಳಗ್ಗೆಯೇ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆರಾಯ ಅಬ್ಬರಿಸುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ.
ಎರಡು ದಿನ ಭಾರಿ ಮಳೆ: ಭಾನುವಾರದಿಂದ ಸೋಮವಾರ ಬೆಳಗ್ಗೆವರೆಗೆ (ಮೇ 26 & 27) ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಇತರೆ ಭಾಗಗಳಲ್ಲೂ ಸಾಧಾರಣ ಮಳೆ ಸುರಿಯುವ ಸಾಧ್ಯೆತೆಯಿದೆ. ಬೆಂಗಳೂರು ನಗರದಲ್ಲೂ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಭಾರೀ ಮಳೆ ಸುರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಎಲ್ಲೆಲ್ಲಿ ಮಳೆ?: ಇಂದು (ಮೇ 26) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯೂ ಆಗಲಿದೆ. ಅದೇ ರೀತಿ ಬೆಂಗಳೂರು ನಗರ, ರಾಮನಗರ, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಆಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗವು 40 ರಿಂದ 50 ಕಿಲೋ ಮಿಟರ್ ಇರಲಿದೆ.