December 24, 2024

ಬಂಗಾಡಿಯ ಮನೆಯೊಳಗೆ ಬುಸ್‌..ಬುಸ್‌! ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

0

 

ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನ ಬಂಗಾಡಿ ಎನ್ನುವಲ್ಲಿ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ.

ಇಂದಬೆಟ್ಟುವಿನ ಮನೆಯೊಳಗೆ ಬೃಹತ್ ಗಾತ್ರ ಕಾಳಿಂಗ ಸರ್ಪ ಕಂಡು ಬಂದಿದ್ದು, ಕೂಡಲೇ ಅದನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ಮನೆಯೊಂದರಲ್ಲಿ ಮನೆಯ ಒಂದು ಪಾರ್ಶ್ವವನ್ನು ಮಾತ್ರ ಬಳಸುತ್ತಿದ್ದರು. ಮತ್ತೊಂದು ಪಾರ್ಶ್ವದ ಕೋಣೆಯನ್ನು ಬಳಸದೇ ಹಾಗೇ ಬಿಡಲಾಗಿತ್ತು. ಇಂದು ಕೋಣೆಯ ಬಾಗಿಲು ತೆಗೆದಾಗ ಮಂಚದಡಿಯಲ್ಲಿ ಬುಸ್.. ಬುಸ್.. ಅನ್ನುವ ಶಬ್ದ ಕೇಳಿ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.

 

ಕೂಡಲೇ ಮನೆಯವರು ಪರೀಕ್ಷಿಸಿದಾಗ ಮಂಚದ ಅಡಿಯಲ್ಲಿ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ತಕ್ಷಣವೇ ಮನೆಯಲ್ಲಿದ್ದವರು ಉರಗ ರಕ್ಷಕ ಅಶೋಕ್ ಲಾಯಿಲ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಶೋಕ್ ಲಾಯಿಲ ಬೃಹತ್‌ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು