ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ: ರಘುಪತಿ ಭಟ್ಗೆ ಟಾಂಗ್ ಕೊಟ್ಟ ಅಲಿಯಾ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್‌ರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಪಕ್ಷದಿಂದ ಉಚ್ಛಾಟನೆಗೊಂಡಿರುವ ರಘುಪತಿ ಭಟ್ ಅವರಿಗೆ ಇದೀಗ ಹಿಜಾಬ್ ವಿವಾದಿಂದ ಕಾಲೇಜಿನಿಂದ ಸಸ್ಪೆಂಡ್ ಆಗಿದ್ದ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಕೌಂಟರ್ ಕೊಟ್ಟಿದ್ದಾರೆ.
ಉಡುಪಿ, (ಮೇ 28): ಈ ಹಿಂದೆ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಉಡಪಿ ಸರ್ಕಾರಿ ಕಾಲೇಜಿನ ಹಿಜಾಬ್ ವಿವಾದ 9Udupi hijab Row) ಭಾರೀ ಸುದ್ದಿಯಾಗಿತ್ತು. ಈ ಹಿಜಾಬ್ ವಿವಾದದ ಸಂಬಂಧ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಅವರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಅಂದು ರಘುಪತಿ ಭಟ್ ಅವರು ಶಾಸಕರಾಗಿದ್ದು, ಕಾಲೇಜಿನ ಅಧ್ಯಕ್ಷರಾಗಿದ್ದರು ಸಹ. ಅಂದು ಹಿಬಾಜ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕಾಲೇಜಿನಿಂದ ಉಚ್ಚಾಟನೆಯಾಗಿದ್ದ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಸದ್ಯ ಮಾಜಿ ಶಾಸಕ ರಘುಪತಿ ಭಟ್ ಪಕ್ಷದಿಂದ ಉಚ್ಚಾಟನೆಯಾಗಿರುವ ಬಗ್ಗೆ ಟ್ವೀಟ್ ಮಾಡಿ ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ಪರೋಕ್ಷವಾಗಿ ಎಲ್ಲರ ಕಾಲೆಳೆಯತ್ತೆ ಕಾಲ ಎಂದು ಟಾಂಗ್ ಕೊಟ್ಟಿದ್ದಾರೆ.
ಟ್ವಿಟ್ಟರ್ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ, ಅಂದು ಹಿಜಾಬ್ ಕಾರಣಕ್ಕಾಗಿ ನನ್ನನ್ನು ಕಾಲೇಜಿನಿಂದ ಹೊರದಬ್ಬಿದ್ರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆಮಾಡಿ ತೋರಿಸಿದ್ದೀರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ಮಾಜಿ ಶಾಸಕ ರಘುಪತಿ ಭಟ್ ಅವರ ಕಾಲೆಳೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಆದರೆ, ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿನಿಗೆ ಅಂದಿನ ಸ್ಥಳೀಯ ಶಾಸಕ ರಘುಪತಿ ಭಟ್ ಅವರು ವಿರೋಧಿಸಿ ಅವಕಾಶ ಕೊಡದೇ ಪರೀಕ್ಷೆ ಬರೆಯುವುದರಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಎರಡು ವರ್ಷಗಳ ಬಳಿಕ ವಿದ್ಯಾರ್ಥಿನಿ ಅಲಿಯಾ ಅಸಾದಿ ‘ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ’ ಎಂದು ತಿರುಗೇಟು ಕೊಟ್ಟಿದ್ದಾರೆ.
ಉಡುಪಿ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ 2023 ರ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ, ಯಶ್ ಪಾಲ್ ಸುವರ್ಣಾ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿತ್ತು. ಬಳಿಕ ಲೋಕಸಭಾ ಚುನಾವಣೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಅದು ಸಹ ಸಿಗಲಿಲ್ಲ. ಕೊನೆಗೆ ಇದೀಗ ಷರಿಷತ್ ಟಿಕೆಟ್ ನೀಡಬಹುದು ಎಂದು ನಂಬಿದ್ದರು. ಆದರೂ ಸಹ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಬೇರೆಯವರ ಪಾಲಾಗಿದೆ. ಇದರಿಂದ ಸಿಡಿದೆದ್ದ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಇದರಿಂದ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ.