ಗೋಳಿಯಂಗಡಿಯ ಸುರೇಶ್ ಕುಲಾಲ್ ಆಕಸ್ಮಿಕವಾಗಿ ಬಿದ್ದು ಮೃತ್ಯು ಮೂಡಬಿದ್ರೆಯಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ವೇಳೆ ದುರ್ಘಟಣೆ
ಕುಕ್ಕೇಡಿ: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಗೋಳಿಯಂಗಡಿ ಕಡ್ತ್ಯಾರು ನಿವಾಸಿ ಸುರೇಶ್ ಕುಲಾಲ್ (31) ಅವರು ಮೂಡಬಿದಿರೆಯಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ವೇಳೆ ಇಂದು ಸಂಜೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ.
ಮೂಡಬಿದಿರೆಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಕಟ್ಟಡ ಕೆಲಸ ನಿರ್ವಹಿಸುತ್ತಿದ್ದ ವೇಳೆ ಗೋಡೆಯ ಮೇಲ್ಬಾಗದಿಂದ ಆಕಸ್ಮಿಕವಾಗಿ ನೆಲಕ್ಕೆ ಬಿದ್ದರು ಎನ್ನಲಾಗಿದೆ. ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ. ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರ, ಸಹೋದರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಮನೆಗೆ ಆಧಾರವಾಗಿದ್ದ ಸುರೇಶ್ ಕುಲಾಲ್ ಅವರ ನಿಧನದಿಂದ ಮನೆಯವರ ಆಕ್ರಂಧನ ಮುಗಿಲುಮುಟ್ಟಿದೆ.