ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ: ನಾಗೇಂದ್ರ ರಾಜಿನಾಮೆಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಮೇ 31: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ತಲೆದಂಡ ಅವರ ಹೆಸರು ಕೇಳಿ ಬರುತ್ತಿದ್ದು, ಸಚಿವರ ತಲೆದಂಡಕ್ಕೆ ವಿಪಕ್ಷಗಳು ಆಗ್ರಹಿಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಈ ಹಿನ್ನೆಲಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.