ವಾಲ್ಮಿಕಿ ನಿಗಮದ ಪ್ರಕರಣ ಸಿಬಿಐಗೆ ನೀಡುವ ಕುರಿತು ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು, ಮೇ 31: ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬ್ಯಾಂಕ್‌ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ ನಡೆದಿದೆಯೋ, ಏನಾಗಿದೆ ಎಂಬುದು ಸಿಐಡಿ ತನಿಖೆಯಿಂದ ಗೊತ್ತಾಗಲಿದೆ. ನೂರು ಕೋಟಿ ರೂ. ಮೇಲು ಅಕ್ರಮವಾಗಿದ್ದರೆ ಮುಂದೆ ಏನು ಆಗುತ್ತದೆ ಎಂಬುದನ್ನು ನೋಡೋಣ. ನಾವಾಗಿಯೇ ಸಿಬಿಐಗೆ ವರ್ಗಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಜೊತೆ ಚರ್ಚೆ ಕುರಿತು ಪ್ರತಿಕ್ರಿಯಿಸಿ, ನಾವು ಸಿಬಿಐಗೆ ವರ್ಗಾವಣೆ ಮಾಡುವುದಿಲ್ಲ. ಅಂತಹ ಸಂದರ್ಭ ಬಂದಾಗ ಸಿಎಂ ಜೊತೆ ಚರ್ಚೆ ಮಾಡಲೇ ಬೇಕಾಗುತ್ತದೆ. ಪ್ರತಿಭಟನೆ ಮಾಡುವುದು ಗಡವು ನೀಡುವುದು ವಿಪಕ್ಷದವರ ಹಕ್ಕು, ಮಾಡಲಿ. ಸರ್ಕಾರದಲ್ಲಿ ನಮಗೆ ಆದಂತಹ ಜವಾಬ್ದಾರಿಗಳಿವೆ. ನಾ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.