December 23, 2024

ವೇಣೂರು ಸರಕಾರಿ ಪ್ರೌಢಶಾಲೆ: ಪ್ರಾರಂಭೋತ್ಸವ

0

 

ವೇಣೂರು: ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಮೆರವಣಿಗೆ ಮೂಲಕ ಬ್ಯಾಂಡ್ ವಾದನದೊಂದಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಹಿತೈಷಿಗಳು, ಹಳೆ ವಿದ್ಯಾರ್ಥಿಗಳು ಆಗಿರುವ ಮೋಹನ್ ದಾಸ್ ಹೆಗ್ಡೆ, ವಿ. ವೆಂಕಟರಮಣ ಕಾಮತ್, ಜಿನರಾಜ್ ಜೈನ್, ಎಸ್ ಡಿ ಎಮ್ ಸಿ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ 30 ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಿಸಲಾಯಿತು. ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಧ್ಯಾಹ್ನ ಸಿಹಿ ಊಟ ನೀಡಲಾಯಿತು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು