ಭಾರೀ ಮಳೆ ಮುನ್ಸೂಚನೆ: ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು, ಜುಲೈ 05: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವೈಪರಿತ್ಯಗಳ ಏರಿಳಿತ ಮುಂದುವರಿದಿದೆ. ಇದರ ಪರಿಣಾಮವಾಗಿ ಮುಂಗಾರು ಮಳೆ ಆರ್ಭಟ ಸಹ ಮುಂದುವರಿಯುತ್ತಿದೆ. ಇದೀಗ ಮತ್ತೆ ಭರ್ಜರಿ ಮಳೆ ಸುರಿಯುವ ಮುನ್ಸೂಚನೆ ಇದ್ದ ವಿವಿಧ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಎರಡು ವಾರದಿಂದ ಹಿಂದೆ ನಿರಂತರವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಲಾಗಿತ್ತು. ಅಂದಿನಂತೆ ಇಂದು ಸಹ ವಾತಾವರಣದಲ್ಲಿ ಹಲವಾರು ಬದಲಾವಣೆಗಳು ಆಗಿವೆ.
ಹವಾಮಾನ ಬದಲಾವಣೆಯ ಪ್ರಭಾವ
ಸದ್ಯ ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಸ್ಟ್ರಫ್-ಸುಳಿಗಾಳಿಯು ಮಹಾರಾಷ್ಟ್ರ, ಗುಜರಾತ್ ಕರಾವಳಿ ವರೆಗೂ ಪ್ರಭಾವ ಬೀರಿದೆ. ಇದರ ಪರಿಣಾಮವಾಗಿ ಮುಂದಿನ ಎರಡು ದಿನಗಳ ಕಾಲ ಜೋರು ಕರ್ನಾಟಕದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು (ಜುಲೈ 7ರವರೆಗೆ) ಅತ್ಯಧಿಕ ಮಳೆ ಬರುವ ಪ್ರಯುಕ್ತ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಜುಲೈ 7ರ ನಂತರ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮೂರು ದಿನ ‘ಯೆಲ್ಲೋ ಅಲರ್ಟ್’ ಕೊಡಲಾಗಿದೆ ಎಂದು ಶುಕ್ರವಾರದ ಐಎಂಡಿ ಮುನ್ಸೂಚನೆ ತಿಳಿಸಿದೆ.