December 24, 2024

ಪಡಿತರ ಚೀಟಿಗೆ ಆಧಾರ್ ಜೋಡಣೆ: ಸೆ. 30ರವರೆಗೆ ಕಾಲಾವಕಾಶ ವಿಸ್ತರಣೆ

0

 

ಬೆಂಗಳೂರು, ಜುಲೈ, 06: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದುಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ  ಶುಭಸುದ್ದಿಯೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.

 

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.

 

ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್‌ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿ ಮಾಡಲಾಗಿತ್ತು.

 

ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್‌ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು