December 24, 2024

Modi 3.0 Budget: ಜುಲೈ 23ರಂದು ಕೇಂದ್ರ ಬಜೆಟ್ ಮಂಡನೆ

0

ನವದೆಹಲಿ, ಜುಲೈ 06: ಕೇಂದ್ರದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬಜೆಟ್ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. 2024-25ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಫೆಬ್ರವರಿ 1ರಂದು ಮಂಡಿಸಲಾಗಿತ್ತು.

ಜುಲೈ 22ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಜುಲೈ 23ರಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದು ಶನಿವಾರ ಪ್ರಕಟಿಸಲಾಗಿದೆ.

ಈ ಕುರಿತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಜುಲೈ 22 ರಿಂದ ಆಗಸ್ಟ್ 12ರ ತನಕ ಸಂಸತ್‌ನ ಬಜೆಟ್ ಅಧಿವೇಶನ ನಡೆಯಲಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು