December 24, 2024

ಮುಂಬರುವ ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ; ದ.ಕ., ಉಡುಪಿಗೆ ಯಾರು?

0

ನಿನ್ನೆಯಷ್ಟೇ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಹಾಗೂ ಸುಧಾಕರ್ ರೆಡ್ಡಿ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮುಂಬರುವ ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ(BJP in charges) ನೇಮಕ ಮಾಡಲಾಗಿದೆ.

 

ವಿಧಾನಪರಿಷತ್ ದ.ಕ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಸ್ತುವಾರಿಗಳಾಗಿ ಸಂಸದರಾದ ಬಸವರಾಜ ಬೊಮ್ಮಾಯಿ‌, ಕೋಟ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರನ್ನು ನೇಮಕ ಮಾಡಲಾಗಿದೆ.

 

ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಉಪನಾಯಕ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಸಂಡೂರು ವಿಧಾನಸಭಾ ಕ್ಷೇತ್ರ-ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಎಂಎಲ್​ಸಿಗಳಾದ ಎನ್.ರವಿಕುಮಾರ್, ಕೆ.ಎಸ್.ನವೀನ್ ನೇಮಿಸಲಾಗಿದೆ.

 

ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಪ್ರತಿಷ್ಠೆ ಕಣವಾಗಿ ತೆಗೆದುಕೊಂಡಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾದ ಡಾ.ಅಶ್ವತ್ಥ್​​ನಾರಾಯಣ, ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಹೆಚ್.ಎಸ್. ಗೋಪಿನಾಥ ರೆಡ್ಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ನೇಮಕ ಮಾಡಲಾಗಿದೆ

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು