ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ: ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಪುನರಾಯ್ಕೆ
ವೇಣೂರು: ಇಲ್ಲಿಯ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ಇಂದು (ಜು. 13ರಂದು) ನಡೆಯಿತು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ. ಶಿವರಾಮ ಹೆಗ್ಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ನೂತನ ಪದಾಧಿಕಾರಿಗಳು
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಹಾಗೂ
ಉಪಾಧ್ಯಕ್ಷರಾಗಿ ರಾಜೇಶ್ ಮೂಡುಕೋಡಿ ಪುನರ್ ಆಯ್ಕೆಗೊಂಡರು. ಖಜಾಂಚಿಯಾಗಿ ಸುಧೀರ್ ಭಂಡಾರಿ ಅವರನ್ನು ಆಯ್ಕೆ ಮಾಡಲಾಯಿತು.
ಸಂಸ್ಥೆಯ ಸಂಚಾಲಕಿ ಶೀಲಾ ಎಸ್. ಹೆಗ್ಡೆ, ನಿಕಟಪೂರ್ವ ಖಜಾಂಚಿ ಶ್ರೀಮತಿ ಸುಜಾತ, ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಬಿ. ಮತ್ತಿತರರು ಉಪಸ್ಥಿತರಿದ್ದರು.
ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಶಿಕ್ಷಕ ವೃಂದಕ್ಕೆ ಸ್ಮರಣಿಕೆ ಪ್ರದಾನ
ಇದೇ ಸಂದರ್ಭದಲ್ಲಿ ಕಳೆದ ಸಾಲಿನ SSLC ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಪ್ರಣೀಶ್ (608) ಹಾಗೂ ಆದಿತ್ಯ ಕೆ.(602) ಇವರನ್ನು ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಶಿಕ್ಷಕರಿಗೆ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶಿಕ್ಷಕಿ ಶ್ರೀಮತಿ ಭವಿತಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಎನ್. ವಂದಿಸಿದರು. ಶಿಕ್ಷಕಿ ಶ್ರೀಮತಿ ಶುಭ್ರ ನಿರೂಪಿಸಿದರು.