ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರು ವರ್ಷದ ಬಳಿಕ ಆರೋಪಿಗಳಿಗೆ ಜಾಮೀನು
ಬೆಂಗಳೂರು ಜುಲೈ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ನ್ಯಾ. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆರು ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಲ್‌ಎಲ್ ಸುರೇಶ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ಹಲವು ಷರತ್ತುಗಳೊಂದಿಗೆ ಆರೋಪಿಗಳಿಗೆ ಜಾಮೀನು ನೀಡಿದೆ. ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದಾರೆ.