ಕಳಪೆ ಮಾಂಸ ದಂಧೆ ಆರೋಪ: ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಇಲಾಖೆ ನೋಟಿಸ್
ಕಳಪೆ ಮಾಂಸ ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಮೊದಲ ಹಂತವಾಗಿ 9 ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್ ನೀಡಲಾಗಿದ್ದು, ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬೆಂಗಳೂರು, ಜುಲೈ 28: ಕಳಪೆ ಮಾಂಸ (Poor quality Meat) ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ರಜಾಕ್ನಿಂದ (Abdul Razak) ಮಾಂಸ ಪಡೆಯುತ್ತಿದ್ದ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಇಲಾಖೆ (Food Department) ನೋಟಿಸ್ ನೀಡಿದೆ. ಮೊದಲ ಹಂತವಾಗಿ 9 ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್ ನೀಡಲಾಗಿದ್ದು, ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಈಗಾಗಲೆ ಇಬ್ಬರು ವಿಚಾರಣೆಗೆ ಹಾಜರಾಗಿದ್ದು, ಉಳಿದವರು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಮನವಿ ಮಾಡಿಕೊಂಡಿದ್ದಾರೆ. ಶನಿವಾರ ಅಬ್ದಲ್ ರಜಾಕ್ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರವೂ ಕೂಡ ಅಬ್ದುಲ್ ರಜಾಕ್ ವಿಚಾರಣೆ ಹಾಜರಾಗಲಿದ್ದಾರೆ.
ಮಾಂಸ ಮಾದರಿ ಸಂಗ್ರಹಕ್ಕೆ ಮುಂದಾದ ಆಹಾರ ಇಲಾಖೆ
ಕುರಿ ಮಾಂಸದ ಜೊತೆಗೆ ನಾಯಿ ಮಾಂಸ ಸಾಗಾಟ ವದಂತಿ ಬೆನ್ನಲ್ಲೆ ಆಹಾರ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು ಕೋಲ್ಡ್ ಸ್ಟೋರೇಜ್ನಲ್ಲಿರುವ ಮತ್ತು ಅಂಗಡಿಗಳಲ್ಲಿನ ಮಾಂಸಗಳ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ. -18 ಡಿಗ್ರಿ ಸ್ಟೋರೇಜ್ನಲ್ಲಿಟ್ಟ ಮಾಂಸ ಹಾನಿಕಾರಕವಲ್ಲ. ಆದರೆ ಅದಕ್ಕೆ ಬಳಸುವ ರಾಸಾಯನಿಕ ಅಪಾಯಕಾರಿ ಈ ಹಿನ್ನೆಲೆಯಲ್ಲಿ ಮಾಂಸದ ಮಾದರಿಗಳನ್ನು ಸಂಗ್ರಹಿಸುವಂತೆ ಆಹಾರ ಇಲಾಖೆ ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಮಾಂಸ ಮಾದರಿ ಸಂಗ್ರಹಕ್ಕೆ ಮುಂದಾದ ಆಹಾರ ಇಲಾಖೆ
ಕುರಿ ಮಾಂಸದ ಜೊತೆಗೆ ನಾಯಿ ಮಾಂಸ ಸಾಗಾಟ ವದಂತಿ ಬೆನ್ನಲ್ಲೆ ಆಹಾರ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು ಕೋಲ್ಡ್ ಸ್ಟೋರೇಜ್ನಲ್ಲಿರುವ ಮತ್ತು ಅಂಗಡಿಗಳಲ್ಲಿನ ಮಾಂಸಗಳ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ. -18 ಡಿಗ್ರಿ ಸ್ಟೋರೇಜ್ನಲ್ಲಿಟ್ಟ ಮಾಂಸ ಹಾನಿಕಾರಕವಲ್ಲ. ಆದರೆ ಅದಕ್ಕೆ ಬಳಸುವ ರಾಸಾಯನಿಕ ಅಪಾಯಕಾರಿ ಈ ಹಿನ್ನೆಲೆಯಲ್ಲಿ ಮಾಂಸದ ಮಾದರಿಗಳನ್ನು ಸಂಗ್ರಹಿಸುವಂತೆ ಆಹಾರ ಇಲಾಖೆ ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಮಾಂಸ ಕಲಬೆರಕೆಯಾಗಿದೆ ಅಂತ ಪತ್ತೆಯಾದರೆ ಕ್ರಮ ಕೈಗೊಳ್ಳುವುದಾಗಿ ಮಾಂಸದಂಗಡಿ ಮಾಲೀಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆಯುಕ್ತ ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.
ತರಕಾರಿ ಮಾದರಿ ಸಂಗ್ರಹ
ಆಹಾರ ಇಲಾಖೆ ಬೆಂಗಳೂರಿನ 300 ಕಡೆ ತರಕಾರಿ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿದೆ. ಪರೀಕ್ಷೆಯಲ್ಲಿ ತರಕಾರಿ ಫ್ರೆಶ್ ಆಗಿರುವಂತೆ ಕಾಣುವುದಕ್ಕೆ ಕೆಮಿಕಲ್ ಬಳಕೆ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತರಕಾರಿ ಅಂಗಡಿಗಳ ಮೇಲೂ ಕ್ರಮಕ್ಕೆ ಇಲಾಖೆ ತಯಾರಿ ನಡೆಸಿದೆ.
ಏನಿದು ಪ್ರಕರಣ
ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜೊತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆರೋಪ ಮಾಡಿದ್ದರು. ಶುಕ್ರವಾರ ರಾಜಸ್ಥಾನದಿಂದ ಬಂದ ಮಟನ್ ಮಾಂಸದ ಬಾಕ್ಸ್ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ತಡೆಹಿಡಿಯಲಾಗಿತ್ತು. ಈ ಮಟನ್ ಬಾಕ್ಸ್ಗಳು ಅಬ್ದುಲ್ ರಜಾಕ್ಗೆ ಸೇರಿದವು ಎಂದು ತಿಳಿದು ಬಂದಿತ್ತು.
ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡ ಈ ಬಾಕ್ಸ್ಗಳನ್ನು ತಡೆದಿದ್ದರು. ಇದರಿಂದ ಸ್ಥಳದಲ್ಲಿ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಬಳಿಕ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದುಕೊಂಡಿದ್ದರು.