ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೂರಿ ಟಿಜೆ ಅಬ್ರಾಹಂ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ದೂರು ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ (Land Denotify) ಮಾಡಿದ್ದಾರೆಂದು ಮೈಸೂರು (Mysore) ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರಿಗೆ ದಾಖಲೆಗಳ ಸಮೇತ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.