ರಾಜಭವನ ಚಲೋ: ಗವರ್ನರ್ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕರು
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಅನುಮತಿ ನೀಡಿರುವ ಕ್ರಮ ಖಂಡಿಸಿ ಕಾಂಗ್ರೆಸ್ ವತಿಯಿಂದ ಇಂದು ರಾಜಭವನ ಚಲೋ ಹಮ್ಮಿಕೊಂಡಿದ್ದು, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಘೋಷಣೆಗಳು ಕೂಗಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಶಾಸಕರು, ಸಚಿವರು, ಸಂಸದರು ಸೇರಿದಂತೆ ನೂರಾರು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಹಾಗೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಹಮ್ಮಿಕೊಂಡಿದ್ದ “ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.