ಜಿಲ್ಲಾಮಟ್ಟದ ಕ್ರೀಡಾಕೂಟ: ಅಮೋಘ ಸಾಧನೆಗೈದ ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು
ವೇಣೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಇವರು ದ್ವಿತೀಯ ಸ್ಥಾನವನ್ನು ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇವರು ಚಕ್ರ ಎಸೆತದಲ್ಲಿ ಬಾಲಕಿಯರ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಎತ್ತರ ಜಿಗಿತದಲ್ಲಿ ವರ್ಷಿಣಿ ಇವರು ತೃತೀಯ ಸ್ಥಾನವನ್ನು ಗಳಿಸಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಗುಂಡೆಸೆತ ಸ್ಪರ್ಧೆಯಲ್ಲಿ ಶರ್ವಿನ್ ಮೋನಿಸ್ ಇವರು ತೃತೀಯ ಸ್ಥಾನವನ್ನು ಪಡೆದು ಕಂಚಿನ ಪದಕವನ್ನು ಬಾಚಿಕೊಂಡಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಮೋಘ ಸಾಧನೆಗೈದ ಕ್ರೀಡಾಪಟುಗಳನ್ನು ಹಾಗೂ ಇವರಿಗೆ ಉತ್ತಮ ತರಬೇತಿಯನ್ನು ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಅವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಾಲಿನಿ ಡಿ’ಸೋಜಾ, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ಶಿಕ್ಷಕರಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.