ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ದಾರರ ಮೆಗಾ ಆಪರೇಷನ್ ನಡೆಯುತ್ತಿದೆ. ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳೇ ಹೆಚ್ಚು ಇರುವ ಶಾಕಿಂಗ್ ಮಾಹಿತಿ ಬಯಲಾಗಿದೆ. ಈ ಹಿನ್ನಲೆಯಲ್ಲಿ ಅನರ್ಹರ ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿ ಎಪಿಎಲ್ಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಇದೀಗ ಸರ್ಕಾರ ಕಾರ್ಮಿಕರ ಕಾರ್ಡುಗಳ ಆಪರೇಷನ್ ನಡೆಸಿದೆ.
ಬೆಂಗಳೂರು (ನವೆಂಬರ್ 20): ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರು ಇದ್ದಾರೆ ಎಂಬ ಸತ್ಯಸಂಗತಿ ಬಯಲಾಗಿದೆ. ಇವುಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಅರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡ್ಗಳು ಸಹ ರದ್ದಾಗಿವೆ. ಇದರಿಂದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವನ್ನಿಟ್ಟುಕೊಂಡು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಈ ಬಿಪಿಎಲ್ ಕಾರ್ಡ್ ಗುದ್ದಾಟದ ಮಧ್ಯ ಸರ್ಕಾರದ ಕಣ್ಣು ಇದೀಗ ಕಾರ್ಮಿಕರ ಕಾರ್ಡಿನ ಮೇಲೆ ಬಿದ್ದಿದ್ದು, ಅನರ್ಹರು ಪಡೆದುಕೊಂಡಿರುವ ಕಾರ್ಮಿಕರ ಕಾರ್ಡ್ಗಳನ್ನು ಗುರುತಿಸಿ ರದ್ದು ಮಾಡಲಾಗುತ್ತಿದೆ
ಎಷ್ಟು ಕಾರ್ಡ್ ಅಮಾನತು?
ಹೌದು…ರಾಜ್ಯದಲ್ಲಿ ಒಟ್ಟು 2,46,951 ಕಾರ್ಮಿಕ ಕಾರ್ಡಗಳು ನಕಲಿ ಎಂದು ಕಾರ್ಮಿಕ ಇಲಾಖೆ ಲಿಸ್ಟ್ ಮಾಡಿದ್ದು, ಇದೀಗ ಅವುಗಳನ್ನು ಸಹ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕಲ ಕಲ್ಯಾಣ ಮಂಡಳಿಯಲ್ಲಿ ಬರೋಬ್ಬರಿ 38 ಲಕ್ಷದ 42 ಸಾವಿರ ಕಾರ್ಮಿಕರು ನೋಂದಣಿ ಮಾಡಿಕೊಂಡು ಕಾರ್ಡ್ ಪಡೆದುಕೊಂಡಿದ್ದಾರೆ. ಈ 38.42 ಲಕ್ಷ ಕಾರ್ಡ್ಗಳ ಪೈಕಿ 2,46,951 ಕಾರ್ಡ್ ನಕಲಿ ಎಂದು ಗೊತ್ತಾಗಿ ಅವುಗಳನ್ನು ರದ್ದು ಮಾಡಿದೆ. ಕರ್ನಾಟಕದಲ್ಲೇ ಅತಿ ಹೆಚ್ಚು ಕಟ್ಟ ಕಾರ್ಮಿಕ ಕಾರ್ಡ್ ರದ್ದಾಗಿರುವುದು ಹಾವೇರಿಯಲ್ಲಿ. ಜಿಲ್ಲೆಯಲ್ಲಿ ಒಟ್ಟು 1,69,180 ಕಾರ್ಡ್ ಗಳು ಅಮಾನತು ಮಾಡಲಾಗಿದೆ.