ಡಿ. 3ರಿಂದ 11ರ ವರೆಗೆ ಭಾರೀ ಮಳೆ: ಕರಾವಳಿಗೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಎಂತದ್ದು?
Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಡಿಸೆಂಬರ್ 11ರ ವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
8 ದಿನ ಭಾರೀ ಮಳೆ ಮುನ್ಸೂಚನೆ: ಡಿಸೆಂಬರ್ 3ರಿಂದ 11ರ ವರೆಗೂ ದಕ್ಷಿಣ ಕನ್ನಡ,, ಉಡುಪಿ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ , ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಶಿವಮೊಗ್ಗ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳೆಲ್ಲವೂ ಸೂರ್ಯನ ಶಾಖಕ್ಕೆ ಸುಟ್ಟು ಹೋಗಿದ್ದವು. ಅಲ್ಲದೆ, ಜಲಮೂಲಗಳೆಲ್ಲ ಬತ್ತಿಹೋಗುವ ಹಂತವನ್ನು ತಲುಪಿ ಅಂತರ್ಜಲ ಮಟ್ಟ ಕುಸಿಯುತ್ತಲೇ ಇತ್ತು. ಇದರಿಂದ ಬೋರ್‌ವೆಲ್‌ಗಳಲ್ಲಿ ನೀರಿಲ್ಲದೆ, ರೈತರು ಆತಂಕಕ್ಕೆ ಒಳಗಾಗಿದ್ದರು. ಆದರೆ, 2024ರ ಜೂನ್ ಆರಂಭ ಆಗುತ್ತಿದ್ದಂತೆ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸಿದ್ದು, ಪರಿಣಾಮ ಜಲಮೂಲಗಳೆಲ್ಲ ಭರ್ತಿಯಾದವು. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಎರಡು ಪಟ್ಟು ಹೆಚ್ಚಾದಂತಾಗಿದೆ.