December 23, 2024

Constitution Day of India 2024 : ಇಂದು ಭಾರತದ ಸಂವಿಧಾನ ದಿನ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ನುಡಿಮುತ್ತುಗಳಿವು

0

ಜಗತ್ತಿನ ಅತಿ ದೊಡ್ಡ ಲಿಖಿತ ಸಂವಿಧಾನವೆಂದರೆ ಅದುವೇ ಭಾರತೀಯ ಸಂವಿಧಾನ. 2015ರಿಂದ ಪ್ರತಿವರ್ಷ ನವೆಂಬರ್‌ 26ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ದೇಶದ ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಮತ್ತು ಕೆಲವು ಕಡೆ ಸಾರ್ವಜನಿಕ ಸ್ಥಳಗಳಲ್ಲಿ ಸಂವಿಧಾನ ದಿನವನ್ನು ಆಚರಿಸುತ್ತಾರೆ. ಈ ವಿಶೇಷ ದಿನದಂದು ಭಾರತೀಯ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಅರಿವು ಮೂಡಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

 

ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಹಾಗೂ ಕಾನೂನುಗಳನ್ನು ವಿವರಿಸುವ ಕಾನೂನು ದಾಖಲೆಯ ತಯಾರಿಸುವಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಅಂಬೇಡ್ಕರ್ ಸೇರಿದಂತೆ ಅಂತಹ ಮಹಾನ್ ವ್ಯಕ್ತಿಗಳ ಶ್ರಮವನ್ನು ಈ ದಿನದಂದು ನೆನಪಿಸಲಾಗುತ್ತದೆ.

 

ಸಂವಿಧಾನ ದಿನದ ಇತಿಹಾಸ
ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ನಂತರ, ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ರಚಿಸುವ ಜವಾಬ್ದಾರಿಯನ್ನು ಸಮಿತಿಗೆ ವಹಿಸಿತು. ಹೌದು, 1946 ರಲ್ಲಿ ಕ್ಯಾಬಿನೆಟ್‌ ಮಿಷನ್‌ ಭಾರತಕ್ಕೆ ಬಂದಾಗ ಸಂವಿಧಾನ ಸಭೆಯನ್ನು ರಚಿಸಲು ಒಪ್ಪಿಗೆ ದೊರೆಯಿತು. ಅದರಂತೆ ಪ್ರಾದೇಶಿಕ ವಿಧಾನಸಭೆಗಳಿಗೆ ಚುನಾವಣೆ ನಡೆದು 389 ಸದಸ್ಯರು ಚುನಾಯಿತರಾದರು. ಇದರಲ್ಲಿ ರಾಜ-ಮಹಾರಾಜರ ಆಳ್ವಿಕೆಯ 93 ಸದಸ್ಯರೂ ಸೇರಿದ್ದರು. ಇದರ ಮೊದಲ ಸಭೆ 1946 ರ ಡಿ. 9 ರಂದು ನವದೆಹಲಿಯಲ್ಲಿ ನಡೆಯಿತು. ಈ ಸಭೆಗೆ ಡಾ. ಬಾಬು ರಾಜೇಂದ್ರ ಪ್ರಸಾದರು ಸಂವಿಧಾನ ಸಭೆಯ ಅಧ್ಯಕ್ಷರಾಗಿದ್ದರು. ಡಾ. ಬಾಬಾಸಾಹೇಬ್​ ಅಂಬೇಡ್ಕರ್‌ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾದರು. ಆ ಬಳಿಕ 1949 ಜನವರಿ 26ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಲಾಯಿತು.

 

1950ರ ಜನವರಿ 26ರಂದು ಅಸ್ತಿತ್ವಕ್ಕೆ ಬಂತು. ಭಾರತದ ಸಂವಿಧಾನವು 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್‌, 5 ಅನುಬಂಧಗಳು, 98 ತಿದ್ದುಪಡಿಗಳನ್ನು ಹೊಂದಿದೆ. ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರಿದ್ದರು. 2015ರಿಂದ ಸಂವಿಧಾನ ದಿನ ಎಂದು ಆಚರಿಸಲು ಪ್ರಾರಂಭಿಸಲಾಯಿತು. ಈ ದಿನದ ಆಚರಣೆಗೂ ಮೊದಲು ಈ ದಿನವನ್ನು ಕಾನೂನು ದಿನವನ್ನಾಗಿ ಆಚರಿಸಲಾಗುತ್ತಿತ್ತು. ದೇಶದ ಜನತೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಈ ದಿನದ ಆಚರಣೆಯೂ ಅಸ್ತಿತ್ವಕ್ಕೆ ಬಂದಿತು. ಈ ಸಂವಿಧಾನ ದಿನವನ್ನು ಸಂವಿಧಾನ್‌ ದಿವಸ್‌ ಎಂದೂ ಕೂಡ ಕರೆಯಲಾಗುತ್ತದೆ.

 

ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಹಾಗೂ ಕಾನೂನುಗಳನ್ನು ವಿವರಿಸುವ ಕಾನೂನು ದಾಖಲೆಯ ತಯಾರಿಸುವಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಅಂಬೇಡ್ಕರ್ ಸೇರಿದಂತೆ ಅಂತಹ ಮಹಾನ್ ವ್ಯಕ್ತಿಗಳ ಶ್ರಮವನ್ನು ಈ ದಿನದಂದು ನೆನಪಿಸಲಾಗುತ್ತದೆ.

 

 

ಸಂವಿಧಾನದ ಮಹತ್ವ ಹಾಗೂ ಆಚರಣೆ
ಭಾರತ ಸಂವಿಧಾನ ದಿನವು ಭಾರತೀಯ ಸಂವಿಧಾನ ಅಂಗೀಕಾರವಾದ ದಿನವಾಗಿದೆ. ಡಾ. ಬಿ.ಆರ್‌.ಅಂಬೇಡ್ಕರ್‌ ಅವರಂತಹ ಮಹಾನ್‌ ವ್ಯಕ್ತಿಗಳ ನೇತೃತ್ವದ ಸಂವಿಧಾನ ರಚನಾ ಸಭೆಯ ಸದಸ್ಯರ ಪ್ರಯತ್ನಗಳನ್ನು ಈ ದಿನ ನೆನಪಿಸಿಕೊಳ್ಳಲಾಗುತ್ತದೆ. ದೇಶದ ಜನತೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವುದು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆಯೂ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲಿಯೂ ಶಾಲಾ, ಕಾಲೇಜುಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ.

 

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ನುಡಿಮುತ್ತುಗಳು
* ಪ್ರಜಾಪ್ರಭುತ್ವ ಹಾಗೂ ಸ್ವರಾಜ್ಯಗಳು ಬರೀ ಹೆಸರಿಗಷ್ಟೇ ಆಗದೆ ತಮ್ಮ ನೈಜ ಸ್ವಭಾವದೊಂದಿಗೆ ಮೂಡಬೇಕು. ಇವು ಸಮಾನತೆಯ ಅಡಿಪಾಯದ ಮೇಲೆ ನಿಂತಿರಬೇಕು. ಶಾಶ್ವತವಾಗಿ ಸ್ಥಿರಗೊಂಡ ಒಂದು ಆಳುವ ವರ್ಗದ ಅಸ್ಥಿತ್ವವೂ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ.

* ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಕಲಿಸುವ ಧರ್ಮವನ್ನು ನಾನು ಇಷ್ಟಪಡುತ್ತೇನೆ.

* ನೀವು ಹುಲಿ ಸಿಂಹಗಳಾಗಿ ಬದುಕಿರಿ, ಯಾಕೆಂದರೆ ಬಲಿಕೊಡುವುದು ಕುರಿಕೋಳಿಗಳನ್ನೇ ಹೊರತು ಹುಲಿಸಿಂಹಗಳನ್ನಲ್ಲ. ನಾವು ಮೊದಲನೆಯದಾಗಿ ಮತ್ತು ಕೊನೆಯದಾಗಿ ಭಾರತೀಯರೇ ಆಗಿದ್ದೇವೆ.

* ಎಲ್ಲಿಯವರೆಗೆ ನೀವು ಸಾಮಾಜಿಕ ಸ್ವಾತಂತ್ರ್ಯದಿಂದ ವಂಚಿತರಾಗಿರುತ್ತೀರೋ, ಅಲ್ಲಿಯವರೆಗೆ ನೀವು ಕಾನೂನಿನಿಂದ ಯಾವುದೇ ಸ್ವಾತಂತ್ರ್ಯವನ್ನು ಪಡೆದರೂ ಅದರ ಪ್ರಯೋಜನ ಬರುವುದಿಲ್ಲ.

* ನಾನು ಸಮುದಾಯದ ಪ್ರಗತಿಯನ್ನು ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಅಳೆಯುತ್ತೇನೆ.

* ‘ಸಂವಿಧಾನ ಎಷ್ಟೇ ಉತ್ತಮವಾಗಿ ರಚಿತಗೊಂಡಿದ್ದರೂ, ಅದನ್ನು ಜಾರಿಗೆ ತರುವವರು ಕೆಟ್ಟವರಾಗಿದ್ದರೆ ಪ್ರಬಲ ಸಂವಿಧಾನ ಕೂಡ ದುರ್ಬಲ ಎನಿಸಿಕೊಳ್ಳುತ್ತದೆ. ಆದರೆ ಅದನ್ನು ಜಾರಿಗೆ ತರುವುದು ಒಳ್ಳೆಯವರ ಪಾಲಾದರೆ ದುರ್ಬಲ ಸಂವಿಧಾನವೂ ಉತ್ತಮ ಎನಿಸಿಕೊಳ್ಳುತ್ತದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು