ಪಠ್ಯೇತರ ಚಟುವಟಿಕೆ: ವೇಣೂರು ಸರಕಾರಿ ಪ್ರೌಢಶಾಲೆಯ ಶ್ರೇಯಸ್ ಭಟ್, ಸುಪ್ರಿಯಾ ಎಸ್. ಹಾಗೂ ಅನ್ವಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ
ವೇಣೂರು: ರಾಜ್ಯ ಚುನಾವಣಾ ಆಯೋಗ ಇದರ ನೇತೃತ್ವದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ವೇಣೂರು ಇಲ್ಲಿಯ 10ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೇಯಸ್ ಭಟ್ ಮತ್ತು ಸುಪ್ರಿಯಾ ಎಸ್. ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
9ನೇ ತರಗತಿಯ ವಿದ್ಯಾರ್ಥಿನಿ ಅನ್ವಿತಾ ಎ. ಆಂಗ್ಲಭಾಷ ಪ್ರಬಂಧದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ವಿಜೇತ ವಿದ್ಯಾರ್ಥಿಗಳಿಗೆ ಉಪ ಪ್ರಾಂಶುಪಾಲರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.