ಸಿಟಿ ರವಿ ಬಂಧನ ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ, ಚಿಕ್ಕಮಗಳೂರು ನಗರ ಬಂದ್!
ಬೆಂಗಳೂರು/ಬೆಳಗಾವಿ, (ಡಿಸೆಂಬರ್ 20): ಸುವರ್ಣ ಸೌಧ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇದರ ಬೆನ್ನಲ್ಲೇ ರಾಜಕೀಯ ಕೋಲಾಹಲ ಸೃಷ್ಟಿಯಾಗಿದೆ. ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ಮತ್ತೊಂದೆ ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಹೋರಾಟ ತೀವ್ರಗೊಳಿಸಿದ್ದು, ಇಂದು (ಡಿಸೆಂಬರ್ 20) ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಡೆಸುವಂತೆ ಕರೆ ಕೊಡಲಾಗಿದೆ. ಇನ್ನು ಸಿಟಿ ರವಿ ಅವರ ತವರು ಜಿಲ್ಲೆ ಚಿಕ್ಕಮಗಳೂರು ನಗರ ಬಂದ್ಗೆ ಕರೆ ನೀಡಲಾಗಿದೆ.