ಬೆಳಗಾವಿ ಅಧಿವೇಶನದ ಕೊನೆ ದಿನ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದರು ಎಂಬ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ. ಏತನ್ಮಧ್ಯೆ, ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದು, ಕೊಲೆಗೆ ಸಂಚು ಹೂಡಿದ್ದಾರೆ ಎಂದು ಸಿಟಿ ರವಿ ಪ್ರತಿ ದೂರು ನೀಡಿದ್ದಾರೆ.