ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಈ ಸಮ್ಮೇಳನದ ಅವಕಾಶ ದೊರೆತಿದೆ. 1926, 1938 ಮತ್ತು 1958ರಲ್ಲಿ ಬಳ್ಳಾರಿಯಲ್ಲಿ ಈ ಸಮ್ಮೇಳನ ನಡೆದಿತ್ತು.


ಮಂಡ್ಯ, ಡಿಸೆಂಬರ್ 22: ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Akhila Bharata Kannada Sahitya Sammelana) ನಡೆಯುತ್ತಿದೆ. ಮೂರನೇ ದಿನ ಇಂದು (ಡಿಸೆಂಬರ್ 22) ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.