ಸುಖಾಸುಮ್ಮನೆ ರಾಹುಲ್ ಗಾಂಧಿ ಹೆಸರು ಬಳಸಬೇಡಿ: ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆ
ವಿಧಾನ ಪರಿಷತ್ ಅಧಿವೇಶನದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ನಡುವೆ ನಡೆದಿದ್ದ ವಿವಾದದಲ್ಲಿ ರಾಹುಲ್ ಗಾಂಧಿ ಹೆಸರು ತಳಕು ಹಾಕದಂತೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ನಾಯಕರಿಗೆ ಖಡಕ್ ಸೂಚನೆ ನೀಡಿದೆ. ರಾಹುಲ್ ಗಾಂಧಿ ಅವರು ಈ ವಿಚಾರದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೈಕಮಾಂಡ್‌ನ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಾಂಗ್ರೆಸ್ ನಾಯಕರಿಗೆ ತಿಳಿಸಲಾಗಿದೆ.