ಬಿಜೆಪಿ ಶಾಸಕ ಮುನಿರತ್ನ ಮೇಲೆ ಅಟ್ಯಾಕ್, ಮೊಟ್ಟೆ ಕಲ್ಲಿನಿಂದ ಹೊಡೆದ ಗುಂಪು
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರ ಮೇಲೆ ಕೆಲವರು ದಾಳಿ ನಡೆಸಿದ್ದಾರೆ. ಮುನಿರತ್ನ ಅವರ ತಲೆಗೆ ಮೊಟ್ಟೆಯಿಂದ ಹೊಡೆದಿರುವ ಘಟನೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆದಿದೆ. ಇಂದು ಕ್ಷೇತ್ರದ ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗವಹಿಸಿ ವಾಪಸ್ ಆಗುತ್ತಿದ್ದಾಗ ಕಲ್ಲು ಮತ್ತು ಮೊಟ್ಟೆಯಿಂದ ದಾಳಿ ನಡೆದಿದೆ.