ಬೆಳ್ತಂಗಡಿ: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಪರಾರಿ ನಾಪತ್ತೆಯಾಗಿದ್ದ ಜೋಡಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ
ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಸುಹಾನಾ, ಹಿಂದೂ ಯುವಕ ಹರೀಶ್ ಗೌಡರನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಫೇಸ್ಬುಕ್ನಲ್ಲಿ ಪರಿಚಯವಾಗಿ ಪ್ರೀತಿಸುತ್ತಿದ್ದ ಜೋಡಿ, ಕಂಪ್ಯೂಟರ್ ತರಗತಿಗೆಂದು ಹೋಗಿದ್ದ ಸುಹಾನಾ ನಾಪತ್ತೆಯಾದ ನಂತರ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಾಜರಾಗಿದ್ದಾರೆ.
ಮಂಗಳೂರು, ಜನವರಿ 10: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ (girl) ಹಿಂದು ಯುವಕನ ಜತೆ ಮದುವೆಯಾಗಿ ಪತ್ತೆ ಆಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹರೀಶ್ ಗೌಡ-ಸುಹಾನಾ ವಿವಾಹವಾಗಿದ್ದಾರೆ. ಬಳಿಕ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಫೇಸ್ಬುಕ್ನಲ್ಲಿ ಪರಿಚಯವಾಗಿ ಪ್ರೀತಿ ಮಾಡಿದ್ದರು. ಬಳಿಕ ಕಂಪ್ಯೂಟರ್ ಕ್ಲಾಸ್ಗೆಂದು ಹೋಗಿದ್ದವಳು ನಾಪತ್ತೆ ಆಗಿದ್ದಳು. ಯುವತಿ ಮನೆಯವರು ಮೂಡಬಿದರೆ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಯುವಕ ಹರೀಶ್ ಗೌಡನನ್ನು ಪ್ರೀತಿಸಿ ಸುಹಾನಾ ಮದುಮೆ ಮಾಡಿಕೊಂಡಿದ್ದಾರೆ. ಸ್ವಇಚ್ಛೆಯಿಂದ ಮದುವೆ ಆಗಿರುವುದಾಗಿ ಯುವತಿ ಹೇಳಿದ್ದಾಳೆ.